ಕರ್ನಾಟಕ

karnataka

ETV Bharat / crime

ಭೀಕರ ರಸ್ತೆ ಅಪಘಾತ: ನಾಲ್ವರ ಸಾವು - ಮಧ್ಯಪ್ರದೇಶದ ಭಿಂದ್-ಗ್ವಾಲಿಯರ್ ಹೆದ್ದಾರಿ

ಮಹಾರಾಷ್ಟ್ರದಲ್ಲಿ ಸೆಕ್ಯುರಿಟಿ ಗಾರ್ಡ್​ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ನಾಲ್ವರು ಮಧ್ಯಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Nepal based 4 killed in MP road accident
ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ

By

Published : Mar 5, 2021, 10:02 AM IST

ಭಿಂದ್​ (ಮಧ್ಯಪ್ರದೇಶ): ಓಮ್ನಿ ಕಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಭಿಂದ್ - ಗ್ವಾಲಿಯರ್ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಇನ್ನೂ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಗ್ವಾಲಿಯರ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರೆಲ್ಲರೂ ನೇಪಾಳ ಮೂಲದವರಾಗಿದ್ದು, ಮಹಾರಾಷ್ಟ್ರದಲ್ಲಿ ಸೆಕ್ಯುರಿಟಿ ಗಾರ್ಡ್​ ಕೆಲಸ ಮಾಡುತ್ತಿದ್ದರು. ತಮ್ಮ ಕುಟುಂಬದೊಂದಿಗೆ ನೇಪಾಳಕ್ಕೆ ಹೊರಟಿರುವ ವೇಳೆ ದುರಂತ ಸಂಭವಿಸಿದೆ.

ಇದನ್ನೂ ಓದಿ: ಡ್ರಗ್ಸ್​ ಪ್ರಕರಣ: ಬಿಗ್​ಬಾಸ್ ಸ್ಪರ್ಧಿ ಮಸ್ತಾನ್ ಮನೆ ಮೇಲೆ ಪೊಲೀಸರ ದಾಳಿ

ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಹೊರಕ್ಕೆ ತೆಗೆದು, ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details