ಕಾನ್ಪುರ (ಉತ್ತರಪ್ರದೇಶ): ಮಿನಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ಬಿಧ್ನು ಪಟ್ಟಣದಲ್ಲಿ ನಡೆದಿದೆ.
ಮಿನಿ ಲಾರಿಗೆ ಕಾರು ಡಿಕ್ಕಿ: ಮದುವೆಗೆ ಹೊರಟಿದ್ದ ನಾಲ್ವರ ದುರ್ಮರಣ
ಕಾರಿನಲ್ಲಿ ಮದುವೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದಾರೆ.
accident
ಕಾರಿನಲ್ಲಿ ಮದುವೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಮತ್ತು ಗಾಯಾಳುಗಳು ಶಹಾಪುರ ಕಾಮಾದ ಉದೇತ್ಪುರ ಗ್ರಾಮದಿಂದ ಮದುವೆಗೆಂದು ಬರುತ್ತಿದ್ದರು. ಈ ವೇಳೆ ರಾಮೈಪುರ ಕಾನೋಡಿಯಾದ ಪೆಟ್ರೋಲ್ ಪಂಪ್ ಸಮೀಪ ಮಿನಿ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.