ಸಿಧಿ (ಮಧ್ಯಪ್ರದೇಶ):ಬರೋಬ್ಬರಿ 51 ಮಂದಿ ಪ್ರಯಾಣಿಕರನ್ನು ಬಲಿ ಪಡೆದ ಸಿಧಿ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಮಾನತು ಮಾಡಿದ್ದಾರೆ.
ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಹಾಗೂ ಮಧ್ಯಪ್ರದೇಶ ರಸ್ತೆ ಅಭಿವೃದ್ಧಿ ನಿಗಮದ (ಎಂಪಿಆರ್‌ಡಿಸಿ) ಮ್ಯಾನೇಜರ್ ಸೇರಿ ನಾಲ್ವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡುತ್ತಿದ್ದೇನೆ ಎಂದು ಮಾಧ್ಯಮಗೋಷ್ಟಿಯಲ್ಲಿ ಸಿಎಂ ತಿಳಿಸಿದ್ದಾರೆ. 32 ಆಸನಗಳ ಸಾಮರ್ಥ್ಯದ ಬಸ್ನಲ್ಲಿ 62 ಮಂದಿ ಪ್ರಯಾಣಿಸುತ್ತಿದ್ದರು. ಇದಕ್ಕೆ ಯಾರು ಹೊಣೆ? ಘಟನೆಗೆ ಕಾರಣರಾದ ಇತರರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಶಿವರಾಜ್ ಸಿಂಗ್ ಹೇಳಿದ್ದಾರೆ.