ಚುರು(ರಾಜಸ್ಥಾನ):ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣ ರಾಜಸ್ಥಾನದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಜನವರಿ 31ರ ರಾತ್ರಿ ಈ ಘಟನೆ ನಡೆದಿದ್ದು, ಅಪ್ರಾಪ್ತ ಸಹೋದರಿಯರಿಬ್ಬರು ವಾಸವಾಗಿದ್ದ ಮನೆಗೆ ನುಗ್ಗಿರುವ ಮೂವರು ಕಾಮುಕರು ಅತ್ಯಾಚಾರವೆಸಗಿದ್ದು, ಘಟನೆ ಬಗ್ಗೆ ಬಾಯ್ಬಿಟ್ಟರೆ ತಂದೆಯ ಕೊಲೆ ಮಾಡುವ ಬೆದರಿಕೆ ಹಾಕಿ ಪರಾರಿಯಾಗಿದ್ದರು. ಇದರಲ್ಲಿ ಓರ್ವ ಪೋಷಕರ ಕೈಯಲ್ಲಿ ಸಿಕ್ಕಿಬಿದ್ದಿದ್ದು, ಗ್ರಾಮಸ್ಥರೆಲ್ಲರೂ ಸೇರಿ ಆತನಿಗೆ ಛೀಮಾರಿ ಹಾಕಿದ್ದರು. ಈ ಆಕ್ರೋಶದಲ್ಲೇ ಬಾಲಕಿಯರ ಅಶ್ಲೀಲ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ.
ಇದನ್ನೂ ಓದಿರಿ:ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ಹಣಕಾಸು ನೆರವು.. ಬಜೆಟ್ನಲ್ಲಿ 1 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ