ಕೌಟುಂಬಿಕ ಕಲಹ: ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾ.ಪಂ ಅಧ್ಯಕ್ಷೆ! - ಧಾರವಾಡ ಜಿಲ್ಲಾ ಸುದ್ದಿ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಕೋಟೂರ ಗ್ರಾಮದಲ್ಲಿ ನಡೆದಿದೆ.

ಧಾರವಾಡ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಕೋಟೂರ ಗ್ರಾಮದಲ್ಲಿ ನಡೆದಿದೆ. ಶೋಭಾ ದೊಡ್ಮನಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾ.ಪಂ ಅಧ್ಯಕ್ಷೆಯಾಗಿದ್ದಾರೆ. ಸದ್ಯ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶೋಭಾ ದೊಡ್ಮನಿ ಧಾರವಾಡ ತಾಲೂಕಿನ ಕೋಟೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದಾರೆ. ಸುದ್ದಿ ತಿಳಿದ ಗ್ರಾಮದ ಕೆಲವರು ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿದ ಹಿನ್ನೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.