ವಡೋದರಾ (ಗುಜರಾತ್): ವಡೋದರಾ ಜಿಐಡಿಸಿ ಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದ್ದು, ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಬಾಲಕಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಗಾಯಾಗಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ 65 ವರ್ಷದ ಪುರುಷ, 30 ವರ್ಷದ ಮಹಿಳೆ ಹಾಗೂ ಅಪ್ರಾಪ್ತರು ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇಂದು ಬೆಳಗ್ಗೆ 9.30ರ ಸುಮಾರಿಗೆ ಕಾರ್ಖಾನೆಯಲ್ಲಿ ಪ್ರಬಲವಾದ ಸ್ಫೋಟವು ಕೇಳಿಸಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿರುವುದಾಗಿ ಮಕರಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಾಜಿದ್ ಬಲೋಚ್ ಹೇಳಿದ್ದಾರೆ.
ಗಾಯಗೊಂಡರವಲ್ಲಿ ಕಾರ್ಖಾನೆಯ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಜನರೂ ಸೇರಿದ್ದಾರೆ. ಸ್ಫೋಟದ ರಭಸಕ್ಕೆ ವಸ್ತುಗಳು ಹೊಡೆದ ಹಿನ್ನೆಲೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡು ಬಳಿಕ ಸಾವನ್ನಪ್ಪಿದ್ದಾರೆ. ಫೋರೆನ್ಸಿಕ್ ತಂಡ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿ ಘಟನೆಗೆ ಕಾರಣ ತಿಳಿಯಲು ಮುಂದಾಗಿದೆ.
ಇದನ್ನೂ ಓದಿ:ಸ್ನೇಹಿತರಿಂದಲೇ ದುಷ್ಕೃತ್ಯ: 20ರ ಯುವತಿ ಮೇಲೆ ಅತ್ಯಾಚಾರವೆಸಗಿದ ಕಾಮುಕರು