ಪಥನಮತ್ತಿಟ್ಟ: ಹೆಂಡತಿಗೆ ಬೆಂಕಿ ಹಚ್ಚಿ ವ್ಯಕ್ತಿವೋರ್ವ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯಲ್ಲಿ ಆಕೆಯ ಮಗಳೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಹೆಂಡತಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ: ಮಗಳ ಸ್ಥಿತಿ ಗಂಭೀರ - ಕೌಟುಂಬಿಕ ಕಲಹ ಹಿನ್ನೆಲೆ ಪತಿ ತನ್ನ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ
ಕೌಟುಂಬಿಕ ಕಲಹ ಹಿನ್ನೆಲೆ ಪತಿ ತನ್ನ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಈ ವೇಳೆ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯಲ್ಲಿ ಈ ದಂಪತಿಯ ಮಗಳು ಸಹ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಹೆಂಡತಿಗೆ ಬೆಂಕಿ ಆತ್ಮಹತ್ಯೆ ಮಾಡಿಕೊಂಡ ಪತಿ,ಮಗಳೂ ಗಂಭೀರ
ತಿರುವಲ್ಲಾ ನೆಡುಂಬರಂನ ಮಥುಕುಟ್ಟಿ (65) ಮತ್ತು ಅವರ ಪತ್ನಿ ಸರಮ್ಮ (59) ಮೃತ ದಂಪತಿ. ಅವರ ಮಗಳು ಲಿಜಿ (35) ಗಂಭೀರ ಗಾಯಗೊಂಡಿದ್ದಾಳೆ. ಈಕೆಯನ್ನು ಆಲಪ್ಪುಳ ಜಿಲ್ಲೆಯ ವಂದನಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಈ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮಗಳು ಲಿಜಿ ಬೆಂಕಿ ಹಚ್ಚುವುದನ್ನು ತಡೆಯಲು ಪ್ರಯತ್ನಿಸಿದ ಸಂದರ್ಭದಲ್ಲಿ ಈಕೆಗೂ ಗಂಭೀರ ಗಾಯಗಳಾಗಿವೆ.
TAGGED:
ಕೌಟುಂಬಿಕ ಕಲಹ