ಕರ್ನಾಟಕ

karnataka

ETV Bharat / crime

ಅಕ್ರಮವಾಗಿ ಗಾಂಜಾ ಮಾರಾಟ, ಇಬ್ಬರು ಆರೋಪಿಗಳ ಬಂಧನ - ಚಿಕ್ಕಮಗಳೂರು ‌ಜಿಲ್ಲೆ ಸುದ್ದಿ

ಶಕೀಲ್ ಮತ್ತು ರೋಷನ್ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿ ಇದ್ದ ಸುಮಾರು 80,000 ಮೌಲ್ಯದ 8 ಕೆಜಿ 100 ಗ್ರಾಂ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ..

Gaanga seez
Gaanga seez

By

Published : Apr 11, 2021, 5:38 PM IST

ಚಿಕ್ಕಮಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಡ್ಯಾಂಪುರ ಎಂಬಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಡಿಸಿಐಬಿ ಪೊಲೀಸರು ದಾಳಿ‌ ನಡೆಸಿದ್ದಾರೆ.

ಶಕೀಲ್ ಮತ್ತು ರೋಷನ್ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿ ಇದ್ದ ಸುಮಾರು 80,000 ಮೌಲ್ಯದ 8 ಕೆಜಿ 100 ಗ್ರಾಂ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details