ಕರ್ನಾಟಕ

karnataka

ETV Bharat / crime

ಗುದದ್ವಾರದಲ್ಲಿ ಅಡಗಿಸಿ ಚಿನ್ನ ಸಾಗಾಟ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಓರ್ವ ಸೆರೆ - mangaluru latest news

ಮಂಗಳೂರು ವಿಮಾನ ನಿಲ್ದಾಣದಲ್ಲಿ ಈತನನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

illegal-gold-smuggler
ಗುದದ್ವಾರದಲ್ಲಿ ಅಕ್ರಮ ಚಿನ್ನ ಸಾಗಾಟ

By

Published : Jan 21, 2021, 3:48 PM IST

ಮಂಗಳೂರು: ಗುದದ್ವಾರದಲ್ಲಿ ಚಿನ್ನ ಅಡಗಿಸಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಓದಿ: ಡಾಲರ್ ಕಳ್ಳಸಾಗಣೆ; ಎಂ. ಶಿವಶಂಕರ್ ಬಂಧಿಸಲು ಕಸ್ಟಮ್ಸ್​ಗೆ ಅನುಮತಿ

ಮಡಿಕೇರಿಯ ಉಬೈದ್ ಬಲಿಯತ್ ಅಝೀಝ್ ಬಂಧಿತ ಆರೋಪಿ. ಇಂದು ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಾನೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಈತನನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಅಂದಾಜು 44.02 ಲಕ್ಷ ರೂ. ಮೌಲ್ಯದ 0.8 ಕೆಜಿ ಚಿನ್ನ ದೊರೆತಿದೆ. ಚಿನ್ನವನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ABOUT THE AUTHOR

...view details