ಚಾಮರಾಜನಗರ:ಪ್ರತ್ಯೇಕ ಪ್ರಕರಣದಲ್ಲಿ ಲಾಕ್ಡೌನ್ ನಡುವೆ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಹನೂರು, ಕೊಳ್ಳೇಗಾಲದಲ್ಲಿ ನಡೆದಿದೆ.
ಪ್ರತ್ಯೇಕ ಪ್ರಕರಣ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ - ರಾಮಾಪುರ ಪೊಲೀಸರು ದಾಳಿ
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಮದ್ಯದ ಪೌಚ್ಗಳನ್ನು ವಶಪಡಿಸಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಸ್ಟೀಫನ್ ಕುಮಾರ್ ಬಂಧಿತ ಆರೋಪಿ. ಈತ ಮಾರ್ಟಳ್ಳಿ ಗ್ರಾಮದ ಬಾರ್ನಲ್ಲಿ ಮದ್ಯ ಖರೀದಿಸಿ ಪಾಲಿ ಮೇಡು ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ರಾಮಾಪುರ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ 90 ಎಂಎಲ್ನ 96 ಪೌಚ್ ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು, ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಸಣಶೆಟ್ಟಿ ಎಂಬ ಟ್ರ್ಯಾಕ್ಟರ್ ಚಾಲಕನನ್ನು ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ 129 ಮದ್ಯದ ಪೌಚ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಲಾಕ್ಡೌನ್ ಅವಧಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ನಿತ್ಯ ಕಾರ್ಯಾಚರಣೆ ಕೈಗೊಳ್ಳುತ್ತಿದ್ದಾರೆ.