ನವದೆಹಲಿ :ಬಹುಕೋಟಿ ವಂಚಕ ಬೆಂಗಳೂರು ಮೂಲದ ಸುಕೇಶ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡನ್ ನಟಿಯರಾದ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನೋರಾ ಫತೇಹಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ದೆಹಲಿ ಪೊಲೀಸರು ಈ ಇಬ್ಬರು ನಟಿಯರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ.
ಈ ಇಬ್ಬರು ಎಂಸಿಒಸಿ ಕಾಯ್ದೆ ಅಡಿಯಲ್ಲಿ ಬರುತ್ತಾರೆ. ಆದರೆ, ಈ ಬಗ್ಗೆ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಇವರ ವಿರುದ್ಧ ಕ್ರಮಕೈಗೊಳ್ಳಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಆರ್ಥಿಕ ಅಪರಾಧಗಳ ವಿಭಾಗವು ಸುಕೇಶ್, ಏಳು ಜೈಲು ಅಧಿಕಾರಿಗಳು ಸೇರಿದಂತೆ 12ಕ್ಕೂ ಅಧಿಕ ಮಂದಿಯನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ಸುಕೇಶ್ ವಿರುದ್ಧ ಎಂಸಿಒಸಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹಾರಾಷ್ಟ್ರದ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಪ್ರಕಾರ 11 ಜನರ ವಿರುದ್ಧ ಚಾರ್ಜ್‌ಶೀಟ್ ಕೂಡ ಸಲ್ಲಿಸಲಾಗಿದೆ.
ವಿಚಾರಣೆ ವೇಳೆ ಸುಕೇಶ್ ವಂಚನೆಯ ಹಣದಲ್ಲಿ ಹೆಚ್ಚಿನ ಭಾಗವನ್ನು ನಟಿಯರಾದ ಜಾಕ್ವೆಲಿನ್ ಫರ್ನಾಂಡಿಸ್, ನೋರಾ ಫತೇಹಿಗೆ ಖರ್ಚು ಮಾಡಿರುವುದಾಗಿ ಬಹಿರಂಗಪಡಿಸಿದ್ದ. ಬೆಲೆ ಬಾಳುವ ಉಡುಗೊರೆಗಳನ್ನು ನೀಡಿದ್ದಲ್ಲದೆ, ಕೋಟ್ಯಂತರ ರೂಪಾಯಿ ಇವರಿಗಾಗಿ ಖರ್ಚು ಮಾಡಿರುವುದಾಗಿ ಹೇಳಿದ್ದ. ಅಂದಿನಿಂದ ಪೊಲೀಸರು ಇಬ್ಬರೂ ನಟಿಯರನ್ನು ಆರೋಪಿಗಳನ್ನಾಗಿ ಮಾಡಲು ಮುಂದಾಗಿದ್ದ ದೆಹಲಿ ಪೊಲೀಸರು ಕಾನೂನು ತಜ್ಞರಿಂದ ಸಲಹೆ ಕೇಳಿದ್ದರು.
ಪ್ರಕರಣದಲ್ಲಿ ಎಂಸಿಒಸಿಎ ಅಡಿಯಲ್ಲಿ ಇಬ್ಬರೂ ನಟಿಯರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕಾನೂನು ತಜ್ಞರು ದೆಹಲಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಇಬ್ಬರು ನಟಿಯರಿಗೂ ಈ ಹಣದ ಮೂಲ ಗೊತ್ತಿತ್ತು ಎಂಬುದು ಸಾಬೀತಾಗಿಲ್ಲ. ಅವರು ಉಡುಗೊರೆಗಳನ್ನು ತೆಗೆದುಕೊಂಡಿರಬಹುದು. ಆದರೆ, ವಂಚನೆಯ ಹಣದಿಂದ ಅವರಿಗೆ ನೀಡಲಾಗುತ್ತಿದೆ ಎಂದು ಅವರಿಗೆ ತಿಳಿದಿರಲಿಲ್ಲ. ಹೀಗಾಗಿ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಜಾಹೀರಾತು:ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ