ಶ್ರೀನಗರ: ಜಮ್ಮು-ಕಾಶ್ಮೀರದ ಅವಂತಿಪೋರಾ ನಾಗಬೀರನ್ ಟ್ರಾಲ್ ಅರಣ್ಯ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭರ್ಜರಿ ಬೇಟೆಯಾಡಿರುವ ಸೇನೆ ಹಾಗೂ ಪೊಲೀಸರು ಜೈಷ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಯೋಧರ ಭರ್ಜರಿ ಬೇಟೆ.. ಜೈಷ್-ಎ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಹತ ಟ್ರಾಲ್ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗುತ್ತಿದ್ದಂತೆ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತಿವರಿದು ಕಾರ್ಯಾಚರಣೆ ಆರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ನಿನ್ನೆಯಷ್ಟೇ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿತ್ತು. ಕ್ರೀವ್ ಪಾಂಪೋರ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿತ್ತು.
ಉಗ್ರರು ಶ್ರೀನಗರದ ಸರಾಫ್ ಕಡಲ್‌ನಲ್ಲಿ ಪೊಲೀಸ್ ಮತ್ತು ಸಿಆರ್‌ಪಿಎಫ್ ಚೆಕ್‌ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ಪೊಲೀಸರು ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದರು.