ನವದೆಹಲಿ: ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಮತ್ತೊಬ್ಬ ಆರೋಪಿಯಾಗಿರುವ ಅವರ ಸ್ನೇಹಿತ ಅಜಯ್ ಕುಮಾರ್ ನ್ಯಾಯಾಂಗ ಬಂಧನ ಅವಧಿಯನ್ನು ಜೂನ್ 25ರವರೆಗೆ ವಿಸ್ತರಿಸಿ ದೆಹಲಿಯ ರೋಹಿಣಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೊಲೆ ಪ್ರಕರಣ ಸಂಬಂಧ ದೆಹಲಿ ನ್ಯಾಯಾಲಯವು ಸುಶೀಲ್ ಕುಮಾರ್, ಅಜಯ್ ಕುಮಾರ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು. ಜೂನ್ 2ರಂದು ಸುಶೀಲ್ ಮತ್ತು ಅಜಯ್ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈ ಅವಧಿ ಇಂದಿಗೆ ಮುಕ್ತಾಯವಾಗಿದ್ದರಿಂದ ಸುಶೀಲ್ ಕುಮಾರ್ರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ದೆಹಲಿ ಪೊಲೀಸರು ಬೇಡಿಕೆಯಿಟ್ಟಿದ್ದರು. ದೆಹಲಿ ಪೊಲೀಸರ ಮನವಿಯನ್ನು ತಿರಿಸ್ಕರಿಸಿದ ಕೋರ್ಟ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ.