ಕರ್ನಾಟಕ

karnataka

ETV Bharat / crime

ವರದಕ್ಷಿಣೆ ಕಿರುಕುಳ ಕೇಸ್‌ ಆರೋಪಿಯಿಂದ ಲಂಚ: ಮಡಿವಾಳ ಠಾಣೆ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌ - in Bribery case Madiwala inSpector suspended In bangalore

ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯಿಂದ ಲಂಚ ಪಡೆದ ಗಂಭೀರ ಆರೋಪದಲ್ಲಿ ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಸುನೀಲ್‌ ನಾಯಕ್‌ ಅವರನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.

Bribery case: Madiwala inSpector suspended In bangalore
ಲಂಚ ಪಡೆದ ಆರೋಪ; ಮಡಿವಾಳ ಇನ್ಸ್‌ಪೆಕ್ಟರ್‌ ಅಮಾನತು

By

Published : Jan 3, 2022, 3:25 PM IST

ಬೆಂಗಳೂರು: ಲಂಚ ಪಡೆದ ಆರೋಪಡಿ ಮಡಿವಾಳ ಠಾಣೆ ಇನ್ಸ್‌ಪೆಕ್ಟರ್ ಸುನೀಲ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ.

ವರದಕ್ಷಿಣೆ ಕಿರುಕುಳ ಸಂಬಂಧ ಆರೋಪಿ ಅಜಯ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಅಜಯ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಯಿಂದ ಆರೋಪಿ ಅಜಯ್‌ನನ್ನು ವಾರೆಂಟ್ ಮೇಲೆ ಕರೆತಂದಿದ್ದ ಪೊಲೀಸರು ಹಣ ಪಡೆದು ಬಿಟ್ಟು ಕಳಿಸಿದ್ದರು.

ಆದರೆ, ಆರೋಪಿ ಪೊಲೀಸರಿಗೆ ಲಂಚದ ರೂಪದಲ್ಲಿ ಹಣ ಕೊಡುವ ವಿಡಿಯೋ ಮಾಡಿ ಮೇಲಧಿಕಾರಿಗಳಿಗೆ ಕಳುಹಿಸಿದ್ದಾನೆ. ಈ ವಿಡಿಯೋ ಆಧರಿಸಿ ಡಿಸಿಪಿ ಶ್ರೀನಾಥ್ ಜೋಷಿ ಅವರಿಗೆ ಕಮಿಷನರ್ ಕಮಲ್ ಪಂತ್ ವರದಿ ಕೇಳಿದ್ದರು‌. ಡಿಸಿಪಿ ವರದಿ ಆಧರಿಸಿ ಕಮಲ್ ಪಂತ್ ಅವರು ಇನ್ಸ್‌ಪೆಕ್ಟರ್ ಸುನೀಲ್ ನಾಯಕ್‌ರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಆಸ್ತಿ ವಿವಾದ: ತಂದೆ, ತಮ್ಮನಿಂದಲೇ ಅಣ್ಣನ ಮನೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನ ಆರೋಪ

For All Latest Updates

TAGGED:

ABOUT THE AUTHOR

...view details