ಥಾಣೆ(ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆ ನಗರದ ಉದ್ಯಮಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಮಾಡಿರುವ ಸೈಬರ್ ವಂಚಕರು ಖಾತೆಯಿಂದ 99.50 ಲಕ್ಷ ರೂ.ಗಳನ್ನು ದೋಚಿದ್ದಾರೆ ಎಂದು ದೂರು ದಾಖಲಾಗಿದೆ. ಈ ವಿಷಯವನ್ನು ಠಾಣೆಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ
ನವೆಂಬರ್ 6-7 ನಡುವೆ ಈ ಹ್ಯಾಕಿಂಗ್ ನಡೆದಿದೆ ಎನ್ನಲಾಗಿದೆ. ಉದ್ಯಮಿಯ ಬ್ಯಾಂಕ್ ಖಾತೆಗಳಿಂದ ಹಣವನ್ನು ನೆಟ್ ಬ್ಯಾಂಕಿಂಗ್ ಮೂಲಕ ಇತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ದೂರು ನೀಡಲಾಗಿದೆ ಎಂದು ವಾಗ್ಲೆ ಎಸ್ಟೇಟ್ ಪೊಲೀಸ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.