ಹುಬ್ಬಳ್ಳಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ಮತ್ತು ವಾಟ್ಸ್ಆ್ಯಪ್ ಮುಖಾಂತರ ಅಶ್ಲೀಲ ವಿಡಿಯೋ ಮತ್ತು ನಗ್ನ ಭಾವಚಿತ್ರಗಳನ್ನು ಪ್ರಸಾರ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ- ಧಾರವಾಡ ಸೈಬರ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್, ಆರೋಪಿ ಬಂಧನ - Hubli-Dharwad Cyber Crime Police Successful
ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಬೇರೆಯವರಿಗೆ ಕಳಿಸುತ್ತಾ ಪ್ರಸಾರ ಮಾಡುತ್ತಿದ್ದ ಕುರಿತು ಸೈಬರ್ ಕ್ರೈಂ ಪೊಲೀಸರು ಮಾಹಿತಿಯನ್ನು ಪಡೆದುಕೊಂಡ ಆರೋಪಿಯನ್ನು ಬಂಧಿಸಿದ್ದಾರೆ. ಸಚಿನ ಶರಣಬಸಪ್ಪ ಕರಣಿಕ ಎಂಬುವವನೇ ಬಂಧಿತ ಆರೋಪಿ. ಈತ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಗೋಳಾಕೆ ಗ್ರಾಮದವನಾಗಿದ್ದಾನೆ.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಎಸ್.ಬಿ. ಮಾಳಗೊಂಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧನ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಎಮ್. ಎಸ್.ಹೂಗಾರ, ಎಸ್.ಜಿ.ಸಿದ್ದನಗೌಡರ, ಎಸ್.ಎಚ್. ತಿಮ್ಮಾಪೂರ, ಎಸ್.ವಿ. ಅಕ್ಕಿಗುಂದಮಠ, ಮೋಹನ ಈಳಿಗೇರ, ಹಲವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
TAGGED:
porn video on social network