ಉತ್ತರ ದಿನಜ್ಪುರ್ (ಪಶ್ಚಿಮ ಬಂಗಾಳ): ವ್ಯಕ್ತಿವೋರ್ವ ತನ್ನ ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ ದಿನಜ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ದಿನಜ್ಪುರ್ ಜಿಲ್ಲೆಯ ರಾಯ್ಗಂಜ್ನಲ್ಲಿ ನಿನ್ನೆ ರಾತ್ರಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸುಟ್ಟು ಕರಕಲಾಗಿದ್ದು, 12 ವರ್ಷದ ಬಾಲಕಿ ಬದುಕುಳಿದಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ರಾಯ್ಗಂಜ್ ವೈದ್ಯಕೀಯ ಕಾಲೇಜು-ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ.