ಭೋಪಾಲ್: ಮಧ್ಯಪ್ರದೇಶದ ಭೋಪಾಲ್-ನಾಗ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈದರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್‌ನಲ್ಲಿದ್ದ ಪ್ರಮಾಣಿಕರು ಪ್ರಾಣಾಪಾಯದಿಂದ ಪಾರಾಗಿದಿದ್ದಾರೆ.
ಬೋಪಾಲ್-ನಾಗ್ಪುರ ರಾಷ್ಟ್ರೀಯ ಹೆದ್ದಾರಿಯ ಘೋರಾಡೋಂಗ್ರಿ ತಹಸಿಲ್‌ನ ನೀಂಪಣಿ ಗ್ರಾಮದ ಬಳಿ ಬುಧವಾರ ರಾತ್ರಿ ಈ ದುರಂತ ಸಂಭವಿಸಿದೆ. ಟೈರ್‌ಗೆ ಹೊತ್ತಿಕೊಂಡಿದ್ದ ಬೆಂಕಿ ನೋಡ ನೋಡುತ್ತಿದ್ದಂತೆ ಇಡೀ ಬಸ್ ಅನ್ನು ಆವರಿಸಿಕೊಂಡು ಕೆಲವೇ ನಿಮಿಷಗಳಲ್ಲಿ ಸುಟ್ಟು ಕರಕಲಾಗಿದೆ. ಮಾಹಿತಿ ಪಡೆದ ಬೇತುಲ್ ಹಾಗೂ ಶಹಪುರದ ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.