ಗ್ವಾಲಿಯರ್ (ಮಧ್ಯಪ್ರದೇಶ): ಬೆಳ್ಳಂಬೆಳಗ್ಗೆ ಬಸ್-ಆಟೋ ನಡುವೆ ಡಿಕ್ಕಿಯಾಗಿ 13 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 13 ಮಂದಿ ದುರ್ಮರಣ - Madhya Pradesh Road accident
07:11 March 23
ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ರಾತ್ರಿ ಮನೆಯಲ್ಲಿಯೇ ಮಲಗಿದ್ದ ಯುವತಿ ಬೆಳಗ್ಗೆ ನೋಡುವಷ್ಟರಲ್ಲಿ ನಾಪತ್ತೆ!
ಪರಿಹಾರ ಘೋಷಣೆ
ದುರಂತಕ್ಕೆ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಣೆ ಮಾಡಿದ್ದಾರೆ.