ದಮೋಹ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ಮಂಗಳವಾರ ದಲಿತ ಕುಟುಂಬದ ಮೂವರನ್ನು ಆರು ಮಂದಿಯ ಗುಂಪು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ಅಹಿರ್ವಾರ್ ಕುಟುಂಬಕ್ಕೆ ಸೇರಿದ ತಂದೆ, ತಾಯಿ ಮತ್ತು ಹಿರಿಯ ಸಹೋದರ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಆರು ಜನರ ಗುಂಪು ಈ ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.
ದಲಿತ ಕುಟುಂಬದ ಮೂವರನ್ನು ಗುಂಡಿಕ್ಕಿ ಕೊಂದ ದುರುಳರು ಜಿಲ್ಲಾ ಕೇಂದ್ರದಿಂದ 20 ಕಿಮೀ ದೂರದಲ್ಲಿರುವ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಾನ್ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ 6:30 ರ ಸುಮಾರಿಗೆ ನಡೆದ ಘಟನೆಯಲ್ಲಿ ದಂಪತಿಯ ಇತರ ಇಬ್ಬರು ಪುತ್ರರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಿಆರ್ ತೆನಿವಾರ್ ತಿಳಿಸಿದ್ದಾರೆ. ತಲೆಮರೆಸಿಕೊಂಡಿರುವ ಆರು ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ.
ಅದೇ ಗ್ರಾಮದವರಾಗಿರುವ ಆರೋಪಿಗಳು 60 ವರ್ಷದ ದಲಿತ ವ್ಯಕ್ತಿ, 58 ವರ್ಷದ ಆತನ ಪತ್ನಿ ಮತ್ತು 32 ವರ್ಷದ ಮಗನನ್ನು ಗುಂಡಿಕ್ಕಿ ಕೊಂದಿದ್ದಾರೆ. ದಾಳಿಯಲ್ಲಿ ಅವರ 28 ಮತ್ತು 30 ವರ್ಷದ ಇಬ್ಬರು ಪುತ್ರರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಲಿತ ಕುಟುಂಬದ ಮೂವರನ್ನು ಗುಂಡಿಕ್ಕಿ ಕೊಂದ ದುರುಳರು... ತಲೆಮರೆಸಿಕೊಂಡ ಆರು ಮಂದಿಗಾಗಿ ಶೋಧ ಪೊಲೀಸರು ಆರು ಆರೋಪಿಗಳ ವಿರುದ್ಧ ಕೊಲೆ ಆರೋಪ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಇತರ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಮಹಿಳೆ ಕೊಲೆ ಮಾಡಿ ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿರುವುದು ಪತ್ತೆ: ಪತಿಗಾಗಿ ಹುಡುಕಾಟ