ಡೆಹ್ರಾಡೂನ್: ಮುಸ್ಲಿ ಮಹಿಳೆಯರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಮಾರಾಟ ಮಾಡುವ ರೀತಿಯಲ್ಲಿ ಬಿಂಬಿಸುತ್ತಿದ್ದ 'ಬುಲ್ಲಿ ಬಾಯಿ' ಆ್ಯಪ್ ಪ್ರಕರಣದ ತನಿಖೆಯನ್ನು ಮುಂಬೈ ಸೈಬರ್ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಉತ್ತರಾಖಂಡ್‌ನಲ್ಲಿಂದು ಪ್ರಮುಖ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮಹಿಳೆ 'ಬುಲ್ಲಿ ಬಾಯಿ' ಆ್ಯಪ್‌ಗೆ ಸಂಬಂಧಿಸಿದ ಮೂರು ಖಾತೆಗಳನ್ನು ನಿರ್ವಹಿಸುತ್ತಿದ್ದಳು ಎಂದು ಮುಂಬೈ ಪೊಲೀಸರು ಹೇಳಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ವಿಶಾಲ್ ಕುಮಾರ್ 'ಖಾಲ್ಸಾ ಸುಪ್ರಿಮಾಸಿಸ್ಟ್' ಹೆಸರಿನಲ್ಲಿ ಖಾತೆ ತೆರೆದಿದ್ದ ಎನ್ನಲಾಗ್ತಿದೆ.