ಮುಂಬೈ(ಮಹಾರಾಷ್ಟ್ರ) :ಸಾಕಿನಾಕಾ ಪ್ರದೇಶದಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದ ಕೃತ್ಯದ ಸಂಪೂರ್ಣ ದೃಶ್ಯ ಬಹಿರಂಗವಾಗಿವೆ. ಸಂತ್ರಸ್ತೆ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಘಟನೆಯ ಬಳಿಕ ಆರೋಪಿ ನಾಪತ್ತೆಯಾಗಿದ್ದು, ಸರಕು ತುಂಬಿದ್ದ ಟೆಂಪೋದಲ್ಲಿ ಸಂತ್ರಸ್ತೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.
ಮುಂಬೈ ಅತ್ಯಾಚಾರ ಪ್ರಕರಣ ; ಮೃತ ಸಂತ್ರಸ್ತೆ ಮೇಲೆ ಆರೋಪಿ ನಡೆಸಿದ ಹಲ್ಲೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಆಕೆಯ ಗುಪ್ತಾಂಗಕ್ಕೆ ರಾಡ್ ಹಾಕಿ, ತಲೆಗೆ ರಾಡ್ನಿಂದ ಹೊಡೆದು ವಿಕೃತಿ ಮೆರೆದಿದ್ದ. ನಿನ್ನೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸರು ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಮಹಿಳೆಯನ್ನು ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಚಿಕಿತ್ಸೆಗೆ ಸ್ಪಂದಿಸದೆ ಸಂತ್ರಸ್ತೆ ಮೃತಪಟ್ಟಿದ್ದಳು. ಇದು 2012ರಲ್ಲಿ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಗ್ಯಾಂಗ್ ರೇಪ್ ಪ್ರಕಣದಂತಿದೆ.
ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಆಕೆಯ ಗುಪ್ತಾಂಗಕ್ಕೆ ರಾಡ್ ಹಾಕಿ, ತಲೆಗೆ ರಾಡ್ನಿಂದ ಹೊಡೆದು ವಿಕೃತಿ ಮೆರೆದಿದ್ದ. ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸರು ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಮಹಿಳೆಯನ್ನು ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಸಿಟಿ ಪೊಲೀಸರು, ವಿಶೇಷ ತನಿಖಾ ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ. ರಾಜಕೀಯ ಪಕ್ಷಗಳು ಘಟನೆಯನ್ನು ಖಂಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಹಾರಾಷ್ಟ್ರದ ವಿರೋಧ ಪಕ್ಷ ಬಿಜೆಪಿ, ಉದ್ಧವ್ ಠಾಕ್ರೆ ಸರ್ಕಾರವನ್ನು ಒತ್ತಾಯಿಸಿದೆ. ಅಲ್ಲದೆ, ಮಹಾರಾಷ್ಟ್ರ ಮಹಿಳೆಯರಿಗೆ ಸುರಕ್ಷಿತವೇ ಎಂದು ಪ್ರಶ್ನಿಸಿದೆ. ಸಿಎಂ ಉದ್ಧವ್ ಠಾಕ್ರೆ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದೊಂದು ಅಮಾನವೀಯ ಕೃತ್ಯ ಎಂದಿದ್ದಾರೆ.
ಇದನ್ನೂ ಓದಿ:ಮುಂಬೈ ರೇಪ್ ಕೇಸ್: ಚಿಕಿತ್ಸೆ ಫಲಿಸದೆ ಸಂತ್ರಸ್ತೆ ಸಾವು..