ಮುಂಬೈ(ಮಹಾರಾಷ್ಟ್ರ): ಮಾದಕವಸ್ತು ನಿಯಂತ್ರಣ ದಳ(NCB) ರಚಿಸಿರುವ ವಿಶೇಷ ತನಿಖಾ ತಂಡ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್‌ಗೆ ಸಂಬಂಧಿಸಿದ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾಕರ್ ಸೈಲ್ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ವಿಚಾರಣೆಗಾಗಿ ಸಮನ್ಸ್ ನೀಡಿದೆ.
ಸಚಿವ ನವಾಬ್ ಮಲಿಕ್ ಅಳಿಯ ಸಮೀರ್ ಖಾನ್ ಡ್ರಗ್ಸ್ ಪ್ರಕರಣ; ಪ್ರಭಾಕರ್ ಸೈಲ್‌ಗೆ SIT ಸಮನ್ಸ್
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್‌ಗೆ ಸಂಬಂಧಿಸಿದ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾಕರ್ ಸೈಲ್‌ಗೆ ಎನ್‌ಸಿಬಿಯ ಎಸ್‌ಐಟಿ ತಂಡ ಸಮನ್ಸ್ ನೀಡಿದೆ. ಪ್ರಕರಣದಲ್ಲಿ ಸಾಕ್ಷಿಯಾಗಿರುವ ಸೈಲ್ ಇಂದು ಮಧ್ಯಾಹ್ನ 2 ಗಂಟೆಗೆ ಬಾಂದ್ರಾದಲ್ಲಿರುವ ಸಿಆರ್‌ಪಿಎಫ್ ಕ್ಯಾಂಪ್ ಕಚೇರಿಗೆ ಆಗಮಿಸಲಿದ್ದಾರೆ.
ಕ್ರೂಸ್ ಡ್ರಗ್ಸ್ ಪ್ರಕರಣದ ಸಾಕ್ಷಿಯಾಗಿರುವ ಪ್ರಭಾಕರ್ ಸೈಲ್ ಅವರನ್ನು ನಿನ್ನೆ 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಎನ್‌ಸಿಬಿ ಡಿಡಿಜಿ ಜ್ಞಾನೇಶ್ವರ್ ಸಿಂಗ್, ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಕುರಿತು ತನಿಖೆ ನಡೆಸುತ್ತಿದೆ. ಎನ್‌ಸಿಬಿಯ ದೆಹಲಿ ವಿಜಿಲೆನ್ಸ್ ಸ್ಕ್ವಾಡ್ ಪ್ರಕರಣದ ಸ್ವತಂತ್ರ ಸಾಕ್ಷಿ ಪ್ರಭಾಕರ್ ಸೈಲ್ ಅವರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ವಿಚಾರಣೆ ಪೂರ್ಣಗೊಳ್ಳದ ಕಾರಣ ಇಂದು ಮತ್ತೆ ಕಚೇರಿಗೆ ಹಾಜರಾಗುವಂತೆ ಸೈಲ್‌ಗೆ ಸೂಚಿಸಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ವಿಚಾರಣೆಯ ಬಗ್ಗೆ ಏನನ್ನೂ ಹೇಳಲಾಗುವುದಿಲ್ಲ. ಸಚಿವ ನವಾಬ್ ಮಲಿಕ್ ಅವರ ಆರೋಪಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಸೈಲ್ ತನ್ನ ವಕೀಲರ ತಂಡದೊಂದಿಗೆ ವಿಚಾರಣೆಗಾಗಿ ಬಾಂದ್ರಾದಲ್ಲಿರುವ ಸಿಆರ್‌ಪಿಎಫ್ ಕ್ಯಾಂಪ್ ಕಚೇರಿಗೆ ಇಂದು ಮಧ್ಯಾಹ್ನ 2 ಗಂಟೆಗೆ ಆಗಮಿಸಲಿದ್ದಾರೆ. ಎನ್‌ಸಿಬಿ ಸಾಕ್ಷಿ ಪ್ರಭಾಕರ್ ಸೈಲ್ ಸಮೀರ್ ವಾಂಖೆಡೆ ಹಾಗೂ ಎನ್‌ಸಿಬಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು.