ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಸಂಬಂಧದ ಡ್ರಗ್ಸ್ ಕೇಸ್ನಲ್ಲಿ ಮಾದಕ ವಸ್ತು ನಿಯಂತ್ರಣ ದಳ (ಎನ್‌ಸಿಬಿ) ಇಂದು ಚಾರ್ಜ್ಶೀಟ್ ಸಲ್ಲಿಸಲಿದೆ.
ಎನ್‌ಸಿಬಿ ಮೂಲಗಳ ಪ್ರಕಾರ ಜಾಮೀನಿನ ಮೇಲೆ ಹೊರಬಂದಿರುವ ನಟಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಸೇರಿ 33 ಮಂದಿಯ ವಿರುದ್ಧ ನ್ಯಾಯಾಲಯದಲ್ಲಿ 12,000ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ಸಲ್ಲಿಸುವ ಸಾಧ್ಯತೆಯಿದೆ.
ಇದನ್ನೂ ಓದಿ:'ಹುಡುಗ ವಾಟ್ಸ್ಆ್ಯಪ್ನಲ್ಲಿದ್ದಂಗೆ ಇಲ್ಲ'... ಮದುವೆ ಬೇಡವೇ ಬೇಡ ಎಂದು ಹೊರಟೇ ಹೋದಳು ವಧು!
ಜೂನ್ 14ರಂದು ಮೃತಪಟ್ಟ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ಭೇದಿಸಲಾಗುತ್ತಿದ್ದು, ಡ್ರಗ್ಸ್ ಲಿಂಕ್ ಕುರಿತ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳನ್ನು ಎನ್‌ಸಿಬಿ ವಿಚಾರಣೆ ನಡೆಸಿದ್ದು, ಹಲವು ಆರೋಪಿಗಳನ್ನು ಬಂಧಿಸಿದೆ.