ಚೆನ್ನೈ (ತಮಿಳುನಾಡು): ಕೋರ್ಟ್ ಕಚೇರಿಯ ಸಹಾಯಕ ಸಿಬ್ಬಂದಿಯೊಬ್ಬ ನ್ಯಾಯಾಧೀಶರಿಗೆ ಚಾಕುವಿನಿಂದ ಇರಿದಿರುವ ಘಟನೆ ಸೇಲಂನಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು 37 ವರ್ಷದ ಪ್ರಕಾಶ್ ಎಂದು ಗುರುತಿಸಲಾಗಿದೆ.
ಪ್ರಕಾಶ್ ಬೇರೆ ಊರಿನಿಂದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಕ್ಕಾಗಿ ಅಸಮಾಧಾನಗೊಂಡು ಮ್ಯಾಜಿಸ್ಟ್ರೇಟ್‌ಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ಸಿಬ್ಬಂದಿ ನ್ಯಾಯಾಧೀಶರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.