ಕಾಂಚಿಪುರಂ (ತಮಿಳುನಾಡು): ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುವ ವೇಳೆ ಕಲ್ಲುಗಳು ಕುಸಿದು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಾಂಚಿಪುರಂನಲ್ಲಿ ನಡೆದಿದೆ.
ಕಲ್ಲು ಕ್ವಾರಿಯಲ್ಲಿ ಅವಘಡ: ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ - Kanchipuram stone quarry accident
ತಮಿಳುನಾಡಿನ ಕಾಂಚಿಪುರಂನಲ್ಲಿರುವ ಕಲ್ಲು ಕ್ವಾರಿಯಲ್ಲಿ ಕಲ್ಲುಗಳು ಕುಸಿದು ಬಿದ್ದು ಓರ್ವ ಕಾರ್ಮಿಕ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಲ್ಲು ಕ್ವಾರಿಯಲ್ಲಿ ಅವಘಡ
ಕಾಂಚಿಪುರಂನ ಮಥುರ್ ಗ್ರಾಮದಲ್ಲಿರುವ ಕ್ವಾರಿಯಲ್ಲಿ ಅವಘಡ ಸಂಭವಿಸಿದ್ದು, ಇನ್ನೂ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ವೇಳೆ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದರು. ಸ್ಥಳಕ್ಕೆ ರಕ್ಷಣಾ ತಂಡಗಳು ಬಂದಿದ್ದು, ಉಳಿದವರನ್ನು ರಕ್ಷಿಸಿದ್ದಾರೆ.