ಸಿರೋಹಿ (ರಾಜಸ್ಥಾನ): ಅತ್ಯಾಚಾರ ಆರೋಪದಡಿ ಬಂಧನವಾಗಿ, ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯು ಸಂತ್ರಸ್ತೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ನಿನ್ನೆ ರಾತ್ರಿ ಮಹಿಳೆಯ ರೀತಿ ಮಾರುವೇಷದಲ್ಲಿ ಮನೆಗೆ ಬಂದು ಕೃತ್ಯ ಎಸಗಿದ್ದಾನೆ.
ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿರುವ ಸಂತ್ರಸ್ತೆಗೆ ಇಬ್ಬರು ಮಕ್ಕಳಿದ್ದು, 2017ರಲ್ಲಿ ಪತಿಯನ್ನು ಕಳೆದುಕೊಂಡಿದ್ದರು. ಒಂಟಿ ಮಹಿಳೆ ಹಿಂದೆ ಬಿದ್ದ ಅದೇ ಗ್ರಾಮದ ವ್ಯಕ್ತಿ ಆಕೆ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದ. ಈ ಸಂಬಂಧ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸ್ವಲ್ಪ ದಿನ ಆತ ಸುಮ್ಮನಿದ್ದ. 2020ರಲ್ಲಿ ಮತ್ತೊಮ್ಮೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.