ಕರ್ನಾಟಕ

karnataka

ETV Bharat / crime

ವಂಚನೆ ಪ್ರಕರಣ: ಕಾರ್ವಿ ವ್ಯವಸ್ಥಾಪಕ ನಿರ್ದೇಶಕ ಪಾರ್ಥಸಾರಥಿ ಬಂಧಿಸಿದ ಇಡಿ

ಷೇರುಪೇಟೆಯಲ್ಲಿನ ಹೂಡಿಕೆದಾರರ ಷೇರುಗಳನ್ನು ತಮ್ಮದೇ ಖಾತೆಗೆ ಟ್ರಾನ್ಸಫರ್​ ಮಾಡಿಕೊಂಡು ವಂಚಿಸಿದ ಆರೋಪ ಪ್ರಕರಣದಲ್ಲಿ ಕಾರ್ವಿ ಸ್ಟಾಕ್ ಬ್ರೋಕಿಂಗ್ ಎಂಡಿ ಪಾರ್ಥಸಾರಥಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

parthasarathi
ಎಂಡಿ ಪಾರ್ಥಸಾರಥಿ

By

Published : Jan 24, 2022, 10:58 PM IST

ಹೈದರಾಬಾದ್​:ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಭಾಗಿಯಾಗಿದ್ದ ಜಾರಿ ನಿರ್ದೇಶನಾಲಯ (ಇಡಿ) ಕಾರ್ವಿ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಪಾರ್ಥಸಾರಥಿಯನ್ನು ಇಡಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.

ಷೇರುಪೇಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ವಂಚನೆ ಮಾಡಿದ್ದನ್ನು ಪೊಲೀಸರು ಪತ್ತೆ ಮಾಡಿದ್ದು, ಕೇಂದ್ರ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಪಾರ್ಥಸಾರಥಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಬೆಂಗಳೂರು ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪಾರ್ಥಸಾರಥಿ ಅವರನ್ನು ಪಿಟಿ ವಾರೆಂಟ್ ಮೇಲೆ ಹೈದರಾಬಾದ್‌ಗೆ ಕರೆತಂದು ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಲಾಗಿದೆ. ನಂತರ ಅವರನ್ನು ಹೈದರಾಬಾದ್‌ನ ಚಂಚಲಗುಡ ಜೈಲಿಗೆ ಹಾಕಲಾಯಿತು.

ಷೇರುಪೇಟೆಯಲ್ಲಿನ ಹೂಡಿಕೆದಾರರ ಷೇರುಗಳನ್ನು ತಮ್ಮದೇ ಖಾತೆಗೆ ತಿರುಗಿಸಿ ವಂಚಿಸಿದ ಪ್ರಕರಣದಲ್ಲಿ ಕಾರ್ವಿ ಸ್ಟಾಕ್ ಬ್ರೋಕಿಂಗ್ ಎಂಡಿ ಪಾರ್ಥಸಾರಥಿ ಅವರನ್ನು ಜಾರಿ ಅಧಿಕಾರಿಗಳು ಬಂಧಿಸಿದ್ದಾರೆ.

ಓದಿ:31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ನಿಮ್ಮ ಜಿಲ್ಲೆಗೆ ಯಾರು?..ಇಲ್ಲಿದೆ ಲಿಸ್ಟ್​

For All Latest Updates

TAGGED:

ABOUT THE AUTHOR

...view details