ಬೆಳಗಾವಿ:ಪೆಟ್ರೋಲ್ ಕಳ್ಳತನ ಮಾಡುತ್ತಿರುವುದನ್ನು ನೋಡಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿ ತಿಪ್ಪೆಗುಂಡಿಯಲ್ಲಿ ಹೂತಿಟ್ಟ ಭಯಾನಕ ಘಟನೆ ಜಿಲ್ಲೆಯ ಗೋಕಾಕ್ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಬಳೋಬಾಳ ಗ್ರಾಮದ ನಿವಾಸಿ ಮಹಾದೇವ ಕಿಚಡಿ(28) ಕೊಲೆಯಾದ ಯುವಕ.
ಅದೇ ಗ್ರಾಮದ ನಿವಾಸಿ, ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಪ್ರವೀಣ ಸುಣಧೋಳಿ ಕೊಲೆ ಆರೋಪಿಯಾಗಿದ್ದು, ಘಟಪ್ರಭಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಪ್ರವೀಣ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ಹಿನ್ನೆಲೆ: ಗೋಕಾಕ್ನ ಬಳೋಬಾಳ ಗ್ರಾಮದ ನಿವಾಸಿಯಾಗಿರುವ ಕೊಲೆ ಆರೋಪಿ ಪ್ರವೀಣ ಸುಣದೋಳಿ ಕೆಲವು ದಿನಗಳ ಹಿಂದೆ ರಸ್ತೆ ಬದಿಯೊಂದರಲ್ಲಿ ನಿಲ್ಲಿಸಿದ್ದ ವಾಹನದಲ್ಲಿದ್ದ ಪೆಟ್ರೋಲ್ ಕಳ್ಳತನ ಮಾಡಲು ಮುಂದಾಗಿದ್ದಾನೆ. ಇದನ್ನು ಕೊಲೆಯಾದ ಮಹಾದೇವ ನೋಡಿದ್ದಾನೆ.