ಮೈಸೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಮೇರೆಗೆ ಪೊಲೀಸ್ ಕಾನ್ಸ್ಟೇಬಲ್ವೊಬ್ಬರನ್ನು ನಜರ್‌ಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ 'ಆರಕ್ಷಕ' ಅರೆಸ್ಟ್ - police constable Arrested for sexually abusing a woman
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ನಗರದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೆಹಬೂಬ್ ಎಂಬಾತನನ್ನು ನಜರ್ ಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
Arrest
ನಗರದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೆಹಬೂಬ್ (36) ಬಂಧಿತ ವ್ಯಕ್ತಿ. ರಾಘವೇಂದ್ರ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೆಹಬೂಬ್ ವಿರುದ್ಧ ಜೂನ್ 15 ರಂದು ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅರೋಪಿಸಿ, ನಜರ್ ಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.