ಕರ್ನಾಟಕ

karnataka

ETV Bharat / crime

ವಕೀಲನಿಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಪೊಲೀಸರಿಂದ ಮನೆ ಶೋಧ - ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ನಾಪತ್ತೆಯಾಗಿರುವ ಆರೋಪಿತ ವಕೀಲ ರಾಜೇಶ್‌ ಭಟ್‌ ಮನೆಯಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

police searching in accused lawyer rajesh bhat house in mangalore
ವಕೀಲನಿಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಪೊಲೀಸರಿಂದ ಮನೆ ಶೋಧ

By

Published : Nov 18, 2021, 2:05 AM IST

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ವಕೀಲ ರಾಜೇಶ್ ಭಟ್ ಅವರ ಮನೆಯಲ್ಲಿ ಪೊಲೀಸರು ನಿನ್ನೆ ಶೋಧ ನಡೆಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಎಸಿಪಿ ರಂಜಿತ್ ಬಂಡಾರು ಅವರ ನೇತೃತ್ವದಲ್ಲಿ ಪೊಲೀಸರು ಮನೆಯಲ್ಲಿ ಶೋಧ ನಡೆಸಿದರು. ಪಂಚರ ಸಮಕ್ಷಮದಲ್ಲಿ ಈ ಶೋಧ ಕಾರ್ಯ ನಡೆದಿದ್ದು, ಪರಾರಿಯಾಗಿರುವ ಆರೋಪಿ ರಾಜೇಶ್ ಭಟ್‌ಗೆ ಸಂಬಂಧಿಸಿದಂತೆ ಮಾಹಿತಿ ಕಲೆಹಾಕಿದ್ದಾರೆ.

ಮಂಗಳೂರಿನ ಖ್ಯಾತ ವಕೀಲರಾಗಿದ್ದ ರಾಜೇಶ್ ಭಟ್ ಅವರು ತಮ್ಮ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆ ಬಂದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು.

ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ರಾಜೇಶ್ ಭಟ್ ಪರಾರಿಯಾಗಿದ್ದಾರೆ. ಆರೋಪಿ ಭಟ್‌ಗಾಗಿ ಶೋಧ ನಡೆಸುತ್ತಿರುವ ಪೊಲೀಸರು ಆತ ವಿದೇಶಕ್ಕೆ ಹೋಗದಂತೆ ತಡೆಯಲು ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಿದ್ದಾರೆ. ಇದೀಗ ರಾಜೇಶ್ ಭಟ್ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಮನೆ ಶೋಧ ನಡೆಸಿದ್ದಾರೆ.

ABOUT THE AUTHOR

...view details