ಕರ್ನಾಟಕ

karnataka

ETV Bharat / crime

6 ವರ್ಷದ ಮಗನನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಾಯಿ - ಕೇರಳದ ಪಾಲಕ್ಕಾಡ್‌

3 ತಿಂಗಳ ಗರ್ಭಿಣಿಯೊಬ್ಬರು ತನ್ನ 6 ವರ್ಷದ ಮಗನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದೆ.

murder
murder

By

Published : Feb 7, 2021, 1:41 PM IST

ಪಾಲಕ್ಕಾಡ್ /ಕೇರಳ: ಮಹಿಳೆಯೊಬ್ಬರು ತನ್ನ 6 ವರ್ಷದ ಮಗನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದೆ.

ಮೂರು ತಿಂಗಳ ಗರ್ಭಿಣಿಯಾಗಿದ್ದ ಶಾಹಿದಾ, ತನ್ನ ಮೂರನೇ ಮಗ ಆಮಿಲ್‌ನನ್ನು ಸ್ನಾನದ ಗೃಹದಲ್ಲಿ ಕತ್ತು ಹಿಸುಕಿ ಕೊಂದು ನಂತರ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಶಾಹಿದಾ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾಳೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ಕುರಿತು ಪೊಲೀಸರು ಶಾಹಿದಾಳನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ಮುಂದುವರೆಸಿದ್ದಾರೆ.

ABOUT THE AUTHOR

...view details