ಕರ್ನಾಟಕ

karnataka

ETV Bharat / crime

ಕೆಲಸ ಕೊಡಿಸುವ ಸೋಗಿನಲ್ಲಿ ಯುವತಿಯರನ್ನ ಕರೆತಂದು ವೇಶ್ಯವಾಟಿಕೆ ದಂಧೆ; ರೌಡಿಶೀಟರ್ ಬಂಧನ - ರೌಡಿ ಶೀಟರ್‌ ಎಂ.ಎನ್‌.ನವೀನ್‌

ವಿವಿಧ ರಾಜ್ಯಗಳ ಯುವತಿಯರಿಗೆ ಕೆಲಸ ಕೊಡಿಸುವ ಆಮಿಷ ನೀಡಿ ಅವರನ್ನು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ರೌಡಿಶೀಟರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ನಗರದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

Rowdy sheeter Arrested under the Goonda Act of Prostitution, bangalore
ಕೆಲಸ ಕೊಡಿಸುವ ಸೋಗಿನಲ್ಲಿ ಯುವತಿಯರನ್ನ ಕರೆತಂದು ವೇಶ್ಯವಾಟಿಕೆ ದಂಧೆ; ರೌಡಿಶೀಟರ್ ಬಂಧನ

By

Published : Aug 10, 2021, 5:00 AM IST

ಬೆಂಗಳೂರು: ಕೆಲಸ ಕೊಡಿಸುವ ಸೋಗಿನಲ್ಲಿ ಬೇರೆ ರಾಜ್ಯಗಳಿಂದ ಯುವತಿಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ರೌಡಿಶೀಟರ್‌ನನ್ನು ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. ಎಂ.ಎನ್.ನವೀನ್ ಬಂಧಿತ ರೌಡಿಶೀಟರ್. ಈತ ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ನಗರದಲ್ಲಿ ನೆಲೆಸಿ, ತನ್ನ ಸಹಚರರ ಮೂಲಕ ಹೊರ ರಾಜ್ಯದ ಯುವತಿಯರನ್ನು ಕರೆತಂದು ಹೋಟೆಲ್, ಲಾಡ್ಜ್‌ಗಳಲ್ಲಿ ಇರಿಸುತ್ತಿದ್ದ. ಬಳಿಕ ಹಣವಿರುವ ಗಿರಾಕಿಗಳಿಗೆ ಈ ಯುವತಿಯರನ್ನು ಕಳುಹಿಸಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಎನ್ನಲಾಗಿದೆ.

ಆರೋಪಿ ವಿರುದ್ಧ ಜಯನಗರ, ಜೆಪಿ ನಗರ, ಕೆಎಸ್ ಲೇಔಟ್, ಬಾಣಸವಾಡಿ ಪೊಲೀಸ್ ಠಾಣೆಗಳಲ್ಲೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿವೆ.
ನವೀನ್ ಜೈಲಿಗೆ ಹೋಗಿ ಬಂದ ಬಳಿಕವೂ ದಂಧೆ ಮುಂದುವರಿಸಿದ್ದ. ಹಾಗಾಗಿ, ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಸಿಸಿಬಿ ಅಧಿಕಾರಿಗಳು ವರದಿ ಸಲ್ಲಿಸಿದ್ದರು. ಸಿಸಿಬಿ ಅಧಿಕಾರಿಗಳ ವರದಿಯನ್ನು ಅಪರಾಧ ವಿಭಾಗದ ಡಿಸಿಪಿ ಕೆ.ಪಿ. ರವಿಕುಮಾರ್ ಹಾಗೂ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಈತನ ಬಂಧನಕ್ಕೆ ಶಿಫಾರಸು ಮಾಡಿದ್ದರು. ಅದರಂತೆ, ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರು ಆರೋಪಿಯನ್ನು ಗೂಂಡಾ ಕಾಯಿದೆಯಡಿ ಬಂಧಿಸುವಂತೆ ಆದೇಶಿಸಿದ್ದರು.

ABOUT THE AUTHOR

...view details