ಬೆಂಗಳೂರು:ಹಳೆ ದ್ವೇಷದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ನೋರ್ವನನ್ನ ಹಂತಕರು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೆ.ಸಿ ಆನಂದ್ (36) ಕೊಲೆಯಾಗಿರುವ ರೌಡಿಶೀಟರ್. ನೆಲಗದರನಹಳ್ಳಿಯ ಶಿವಪುರ ಬಳಿ ರಾತ್ರಿ 8 ಗಂಟೆ ವೇಳೆ ದುರ್ಘಟನೆ ಸಂಭವಿಸಿದೆ .ಪೀಣ್ಯ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಕೊಲೆಯಾದ ಆನಂದ್ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿದ್ದನು. ಮೂರು ದಿನಗಳ ಹಿಂದಷ್ಟೇ ಜಾಮೀನಿನ ಮೇರೆಗೆ ಹೊರಬಂದಿದ್ದ. ನೆಲಗದರಹಳ್ಳಿ ಆನಂದ್ ಬರುವಿಕೆ ಅರಿತಿದ್ದ ಐದಾರು ಮಂದಿ ದುಷ್ಕರ್ಮಿಗಳು ಏಕಾಏಕಿ ಮಾರಾಕಾಸ್ತ್ರಗಳಿಂದ ಅಟ್ಯಾಕ್ ಮಾಡಿ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.