ಥಾಣೆ (ಮಹಾರಾಷ್ಟ್ರ):ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಮಹಾರಾಷ್ಟ್ರ ಪೊಲೀಸರು ಮೂವರನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ನಿಖರ ಮಾಹಿತಿ ಮೇರೆಗೆ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿರುವ ಲಾಡ್ಜ್ ಮೇಲೆ ನಾರ್ಪೋಲಿ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಯುವತಿಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಿದ ಆರೋಪದ ಮೇಲೆ ಲಾಡ್ಜ್ ಮ್ಯಾನೇಜರ್ ಹಾಗೂ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.