ಕರ್ನಾಟಕ

karnataka

ETV Bharat / crime

ಶಿಗ್ಗಾವಿಯಲ್ಲಿ ಕೆಜಿಎಫ್​-2 ಸಿನಿಮಾ ವೀಕ್ಷಣೆ ವೇಳೆ ಗುಂಡು ಹಾರಿಸಿದ ದುಷ್ಕರ್ಮಿ.. ಓರ್ವನಿಗೆ ಗಾಯ

ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಯೋರ್ವ ಗುಂಡು ಹಾರಿಸಿದ ಪರಿಣಾಮ ಯುವಕನೋರ್ವ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ನಡೆದಿದೆ.

shoot-out-while-watching-kgf-2-haveri
ಕೆಜಿಎಫ್​-2 ಸಿನಿಮಾ ವೀಕ್ಷಣೆ ವೇಳೆ ಗುಂಡು ಹಾರಿಸಿದ ದುಷ್ಕರ್ಮಿ, ಓರ್ವನಿಗೆ ಗಾಯ

By

Published : Apr 20, 2022, 8:41 AM IST

Updated : Apr 20, 2022, 11:02 AM IST

ಹಾವೇರಿ: ಚಲನಚಿತ್ರ ವೀಕ್ಷಣೆ ವೇಳೆ ದುಷ್ಕರ್ಮಿಯೋರ್ವ ಗುಂಡು ಹಾರಿಸಿದ ಪರಿಣಾಮ ಯುವಕನೋರ್ವ ಗಾಯಗೊಂಡಿರುವ ಘಟನೆ ಜಿಲ್ಲೆ ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗುಂಡೇಟಿನಿಂದ ಗಾಯಗೊಂಡವನನ್ನು 27 ವರ್ಷದ ವಸಂತಕುಮಾರ ಶಿವಪುರ ಎಂದು ಗುರುತಿಸಲಾಗಿದೆ. ಯುವಕನ ಹೊಟ್ಟೆಯ ಭಾಗ ಮತ್ತು ಕಾಲಿಗೆ ಗುಂಡು ತಗುಲಿದೆ. ದುಷ್ಕರ್ಮಿ ರಿವಾಲ್ವಾರ್​ನಿಂದ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಈ ದುರ್ಘಟನೆ ನಡೆದಿದೆ.

ಗಾಯಾಳುವಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ‌. ಚಿತ್ರಮಂದಿರದಲ್ಲಿ ಗುಂಡು ಹಾರಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಹನುಮಂತರಾಯ, ಹೆಚ್ಚುವರಿ ಎಸ್ಪಿ ವಿಜಯಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಸ್ಪಿ ಹನುಮಂತರಾಯ

ಚಿತ್ರವೀಕ್ಷಣೆ ವೇಳೆ ಕಾಲು ತಗುಲಿದೆ ಎಂಬ ವಿಚಾರಕ್ಕೆ ಮಾತಿನ ಚಕಮಕಿ ನಡೆದು ಗುಂಡಿನ ದಾಳಿ ನಡೆದಿದೆ ಎಂಬ ಮಾಹಿತಿ ಸಿಕ್ಕಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಇದನ್ನೂ ಓದಿ:ಕೆಬಿಸಿ ಆರಂಭಕ್ಕೂ ಮುನ್ನ ಕಾದ ಕುಳಿತಿದ್ದಾರೆ ಸೈಬರ್​ ವಂಚಕರು.. ಬಲೆಗೆ ಬಿದ್ದೀರಿ ಜೋಕೆ

Last Updated : Apr 20, 2022, 11:02 AM IST

ABOUT THE AUTHOR

...view details