ಕಾನ್ಪುರ (ಉತ್ತರ ಪ್ರದೇಶ): ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಉರುಳಿ ಬಿದ್ದು ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಾನ್ಪುರದ ಭೋಗ್ನಿಪುರ ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ಇನ್ನೂ ಎಂಟು ಕಾರ್ಮಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.