ಶಿವಮೊಗ್ಗ: ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ನಡೆದಿದೆ.
ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ನೇಣಿಗೆ ಶರಣು - shivamogga crime news
ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೊಟ್ಟೆ ನೋವು ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೇಣಿಗೆ ಶರಣು
ಚಂದ್ರಗುತ್ತಿ ಗ್ರಾಮದ ನಾಗರಾಜ್ ಮರಡಿ ಅವರ ಪುತ್ರಿ ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸುಚಿತ್ರಾಗೆ ಹಲವು ದಿನಗಳಿಂದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅನೇಕ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಂಡರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದ ವಿದ್ಯಾರ್ಥಿನಿ, ಪೋಷಕರು ಹೊಲಕ್ಕೆ ಹೋದ ವೇಳೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.