ಕೊಳ್ಳೇಗಾಲ: ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಚಿಕಲವಾಡಿ ಗ್ರಾಮದಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಚಿಕಲವಾಡಿ ಗ್ರಾಮದ ನಿವಾಸಿ ಮಹೇಂದ್ರ (19) ಬುಧವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈತ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಇತ್ತೀಚೆಗೆ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನ್ಯಾಯಾಲಯದಿಂದ ನೋಟಿಸ್ ನೀಡಲಾಗಿತ್ತು. ಇದರಿಂದಾಗಿ ಬೇಸತ್ತ ವಿದ್ಯಾರ್ಥಿ, ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.