ಕರೀಂನಗರ್(ತೆಲಂಗಾಣ):ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಘಟನೆ ತೆಲಂಗಾಣದ ಕರೀಂನಗರದಲ್ಲಿ ಸಂಭವಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಆಟೋದಲ್ಲಿದ್ದ ನಾಲ್ವರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.
ಘಟನೆ ವೇಳೆ ವಿದ್ಯಾರ್ಥಿಗಳಿಗೆ ಯಾವುದೇ ಗಾಯಗಳಾಗಿಲ್ಲ, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಶೇಕಾಭಿ ಕಾಲೋನಿಯ ವಿದ್ಯಾರ್ಥಿಗಳು ಶಾಲೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಆಟೋ ಚಾಲಕ ಅಪ್ರಾಪ್ತ ವಯಸ್ಕನಾಗಿದ್ದು, ಫೋನ್‌ನಲ್ಲಿ ಮಾತನಾಡುತ್ತಲೇ ಆಟೋ ಚಲಾಯಿಸಿರುವುದೇ ಅವಘಡಕ್ಕೆ ಕಾರಣ ಎನ್ನಲಾಗ್ತಿದೆ.