ಖಂಡೇಲಾ (ರಾಜಸ್ಥಾನ್): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ರಿಂಗಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಇಂದು ಸಂಜೆ ನಡೆದಿದೆ.
ಸೇತುವೆಯಿಂದ ಕೆಳಗೆ ಬಿದ್ದ ಕಾರು ; ರಾಜಸ್ಥಾನದಲ್ಲಿ ಐವರ ದಾರುಣ ಸಾವು - ಸೇತುವೆಯಿಂದ ಕೆಳಗೆ ಬಿದ್ದ ಕಾರು
ಮೃತರ ಕುಟುಂಬಸ್ಥರಿಗೆ ನೋವನ್ನು ತಡೆಯುವ ಶಕ್ತಿಯನ್ನು ದೇವರು ನೀಡಲಿ. ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಗೊಂಡ ವ್ಯಕ್ತಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಸಿಎಂ ಅಶೋಕ್ ಗೆಹ್ಲೋಟ್ ಕಂಬನಿ ಮಿಡಿದಿದಾರೆ..
ಕಾರು ಜೈಪುರದಿಂದ ಸಿಕಾರ್ ಕಡೆಗೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಕಾರಿನಲ್ಲಿದ್ದ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಪ್ರಕರಣ ದಾಖಲಾಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಘಟನೆಗೆ ಸಿಎಂ ಗೆಹ್ಲೋಟ್ ಕಂಬನಿ :ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅಶೋಕ್ ಗೆಹ್ಲೋಟ್ ಕಂಬನಿ ಮಿಡಿದರು. ರಿಂಗಸ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರಿಗೆ ನೋವನ್ನು ತಡೆಯುವ ಶಕ್ತಿಯನ್ನು ದೇವರು ನೀಡಲಿ. ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಗೊಂಡ ವ್ಯಕ್ತಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದಿದ್ದಾರೆ.