ಕರ್ನಾಟಕ

karnataka

ETV Bharat / crime

ಪ್ರಯಾಣಿಕರ ಸೋಗಿನಲ್ಲಿ ಕಳ್ಳತನ ಮಾಡಿದ ಗ್ಯಾಂಗ್ ಅಂದರ್.. - ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್‌

ಈ ಖದೀಮರಿಂದ ಒಟ್ಟು ₹4.60 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ₹48 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ..

Theft arrested
Theft arrested

By

Published : Apr 14, 2021, 5:42 PM IST

ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ‌ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನ ಉಪ್ಪಾರಪೇಟೆ ಠಾಣಾ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ಚಂದ್ರೇಗೌಡ (45), ಮಂಜುಳಾ (32), ಜಮಾಲ್ ಅಬ್ಧುಲ್ ನಾಸಿರ್ (51) ಹಾಗೂ ಪ್ರಶಾಂತ್ (50) ಬಂಧಿತ ಖತರ್ನಾಕ್ ಕಳ್ಳರು. ಈ ನಾಲ್ವರನ್ನ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ ಇನ್ನೂ 5 ಪ್ರಕರಣ ಬೆಳಕಿಗೆ ಬಂದಿವೆ.

ಈ ಖದೀಮರಿಂದ ಒಟ್ಟು ₹4.60 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ₹48 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.

ABOUT THE AUTHOR

...view details