ಕರ್ನಾಟಕ

karnataka

ETV Bharat / crime

ರಸ್ತೆ ಬದಿ ರಕ್ತಸಿಕ್ತ ಸ್ಥಿತಿಯಲ್ಲಿ ಮೂವರ ಮೃತದೇಹ ಪತ್ತೆ - ಉತ್ತರ ಪ್ರದೇಶದ ಮಿರ್ಜಾಪುರ

ರಕ್ತಸಿಕ್ತ ಸ್ಥಿತಿಯಲ್ಲಿ ಮೂವರು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಂದು, ಶವಗಳನ್ನು ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

Uttar Pradesh
ರಸ್ತೆ ಬದಿ ರಕ್ತಸಿಕ್ತ ಸ್ಥಿತಿಯಲ್ಲಿ ಮೂವರ ಮೃತದೇಹಗಳು ಪತ್ತೆ

By

Published : Mar 14, 2021, 10:39 AM IST

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ನಂದಪುರ ಗ್ರಾಮದ ರಸ್ತೆ ಬದಿಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಮೂವರು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿವೆ.

ಮೃತದೇಹಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಗುರುತುಗಳಿವೆ. ಹೀಗಾಗಿ ಅಮಾನುಷವಾಗಿ ಕೊಂದ ದುಷ್ಕರ್ಮಿಗಳು ಶವಗಳನ್ನು ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್​ರೇಪ್: ಎಫ್‌ಐಆರ್ ದಾಖಲು

ಸ್ಥಳಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್ ಗೋಪಾಲ್ ಗುಪ್ತಾ ನೇತೃತ್ವದ ತಂಡ ಹಾಗೂ ವಿಧಿವಿಜ್ಞಾನ ತಜ್ಞರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಓರ್ವ ಮೃತ ವ್ಯಕ್ತಿಯ ಜೇಬಿನಲ್ಲಿ ಕಾರ್ಟ್ರಿಡ್ಜ್ ಪತ್ತೆಯಾಗಿದೆ.

ABOUT THE AUTHOR

...view details