ಕರ್ನಾಟಕ

karnataka

ETV Bharat / crime

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್‌ ; 20 ಮಂದಿಗೆ ಗಾಯ - ಕಳಿಂಗ ಘಾಟಿ ರಸ್ತೆಯಲ್ಲಿ ಉರುಳಿ ಬಿದ್ದ ಬಸ್‌

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದ ಬಸ್‌ ಉರುಳಿ ಬಿದ್ದಿದೆ ಎಂದು ಶಂಕಿಸಲಾಗಿದೆ..

20 injured as tourist bus overturns in Kalinga Ghati
ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್‌; 20 ಮಂದಿಗೆ ಗಾಯ

By

Published : Dec 17, 2021, 2:09 PM IST

ಭಂಜಾನಗರ (ಒಡಿಶಾ): ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿ ಬಿದ್ದ ಪರಿಣಾಮ 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ಜಿ ಉದಯಗಿರಿ ಪೊಲೀಸ್ ವ್ಯಾಪ್ತಿಯ ಕಳಿಂಗ ಘಾಟಿ ರಸ್ತೆಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.

ಅಪಘಾತಕ್ಕೀಡಾದ ಬಸ್‌ ದರಿಂಗಾಬಾದಿಯಿಂದ ಪಶ್ಚಿಮ ಬಂಗಾಳಕ್ಕೆ ವಾಪಸ್‌ ಆಗುತ್ತಿದ್ದಾಗ ಅವಘಡ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡವರನ್ನು ಬೆರ್ಹಾಂಪುರದ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಾಗಳುಗಳನ್ನು ಜಿ ಉದಯಗಿರಿಯ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದ ಬಸ್‌ ಉರುಳಿ ಬಿದ್ದಿದೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ:ಶಾಪಿಂಗ್​ ಮಾಲ್​ನಲ್ಲಿ ಅಗ್ನಿ ಅವಘಡ.. ಭಯದಿಂದಲೇ ಪ್ರಾಣಬಿಟ್ಟ 27 ಜನ!

ABOUT THE AUTHOR

...view details