ಕರ್ನಾಟಕ

karnataka

ETV Bharat / crime

ಬೆಳಗಾವಿ: ಭೀಕರ ರಸ್ತೆ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು - ಖಾನಾಪೂರ ಠಾಣೆಯ ಪೊಲೀಸರು

ಟಿಪ್ಪರ್ ಗುದ್ದಿದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅವಘಡದಲ್ಲಿ ನೆಲಕ್ಕೆ ಅಪ್ಪಳಿಸಿ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ‌.

Two died on the spot in a terrible road accident in Belgaum..!
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು..!

By

Published : Nov 15, 2022, 6:00 PM IST

Updated : Nov 15, 2022, 6:46 PM IST

ಬೆಳಗಾವಿ: ಹಿಂಬದಿಯಿಂದ ಬೈಕ್‌ಗೆ ಹಾಗು ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಮತ್ತು ಯುವತಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಖಾನಾಪೂರ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು ,ಓರ್ವನಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದರಿಂದ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿ: ಭೀಕರ ರಸ್ತೆ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಿಡಲಗಿ ಗ್ರಾಮದ ಪ್ರವೀಣ್ ಕೋಲ್ಕಾರ್ (27), ಬೆಳಗಾವಿ ತಾಲೂಕಿನ ಮಜಗಾಂವ್​ ಗ್ರಾಮದ ಐಶ್ವರ್ಯ ನರಸನ್ನವರ(20) ಸಾವನ್ನಪ್ಪಿದವರು. ಮೃತರ ಪೈಕಿ ಪ್ರವೀಣ್, ಐಶ್ವರ್ಯ ನರಸನ್ನವರ ಹಾಗೂ ಸಂತೋಷ ಬೈಕ್‌ನಲ್ಲಿ ನಂದಗಡದಿಂದ ಖಾನಾಪುರಕ್ಕೆ ಬರುತ್ತಿದ್ದ ವೇಳೆ ಟಿಪ್ಪ‌ರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇವರೆಲ್ಲರೂ ಒಂದೇ ಕುಟುಂಬದ ಸದಸ್ಯರು ಎನ್ನಲಾಗ್ತಿದೆ.

ಟಿಪ್ಪರ್ ಗುದ್ದಿದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅವಘಡದಲ್ಲಿ ನೆಲಕ್ಕೆ ಅಪ್ಪಳಿಸಿ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ‌. ಅಪಘಾತಕ್ಕೆ ಕಾರಣವಾಗಿರುವ ಚಾಲಕ ಟಿಪ್ಪರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಖಾನಾಪೂರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ:ಕಬ್ಬು ತುಂಬಿದ ಟ್ರ್ಯಾಕ್ಟರ್​ ಹರಿದು ಗರ್ಭಿಣಿ ಸ್ಥಳದಲ್ಲೇ ಸಾವು: ತಾಯಿ ಹೊಟ್ಟೆಯಲ್ಲೇ ಪ್ರಾಣ ಕಳೆದುಕೊಂಡ ಶಿಶು

Last Updated : Nov 15, 2022, 6:46 PM IST

ABOUT THE AUTHOR

...view details