ಆಲಪ್ಪುಳ(ಕೇರಳದ ): ಕರಾವಳಿ ಜಿಲ್ಲೆ ಆಲಪ್ಪುಳದಲ್ಲಿ ಇಬ್ಬರು ರಾಜಕಾರಣಿಗಳ ಸರಣಿ ಹತ್ಯೆಗಳು ಭಾರಿ ಸಂಚಲನ ಮೂಡಿಸಿವೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜ್ಯ ಕಾರ್ಯದರ್ಶಿ ಕೆ.ಎಸ್.ಶಾನ್ ಅವರನ್ನು ಶನಿವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪಕ್ಷದ ಕಚೇರಿಯಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಬೈಕ್‌ನಲ್ಲಿ ಹೋಗುತ್ತಿದ್ದ ಶಾನ್‌ಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮೊದಲು ಡಿಕ್ಕಿ ಹೊಡೆದಿದ್ದಾರೆ. ಆತ ನೆಲಕ್ಕೆ ಬಿದ್ದ ಕೂಡಲೇ ತೀವ್ರವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಗಾಯಾಳು ಶಾನ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹತ್ಯೆಯಲ್ಲಿ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಎಸ್‌ಡಿಪಿಐ ಆರೋಪಿಸಿದೆ.
ಬಿಜೆಪಿ ಮುಖಂಡನ ಹತ್ಯೆ