ಲಖನೌ: ಆನ್‌ಲೈನ್ ಬ್ಯಾಂಕ್ ಖಾತೆಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಚೀನಾದ ಪ್ರಜೆಯನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಬಂಧಿತನನ್ನು ಸುನ್ ಜಿ ಯಿಂಗ್ ಅಲಿಯಾಸ್ ಡೇವಿಡ್ ಎಂದು ಗುರುತಿಸಲಾಗಿದೆ. ಈತ ನಕಲಿ ಗುರುತಿನ ದಾಖಲೆಗಳನ್ನು ನೀಡಿ ಪಡೆದ ಸಿಮ್ ಕಾರ್ಡ್‌ಗಳ ಆಧಾರದ ಮೇಲೆ ಆನ್‌ಲೈನ್ ಬ್ಯಾಂಕ್ ಖಾತೆಗಳನ್ನು ತೆರೆದಿದ್ದನು. ಇದರ ಮೂಲಕ ಅಕ್ರಮವಾಗಿ ಹಣ ವರ್ಗಾಯಿಸುತ್ತಿದ್ದನು.