ಕರ್ನಾಟಕ

karnataka

ETV Bharat / crime

ತನ್ನಿಬ್ಬರು ಪುಟ್ಟ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ - ದೆಹಲಿ ಕ್ರೈಂ ಸುದ್ದಿ

ದೆಹಲಿಯ ಶಕುರ್ಪುರ ಪ್ರದೇಶದಲ್ಲಿ ತನ್ನಿಬ್ಬರು ಪುಟ್ಟ ಮಕ್ಕಳನ್ನು ಕೊಂದ ಮಹಿಳೆಯೊಬ್ಬರು ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Woman commits suicide with two children in Delhi
ತನ್ನಿಬ್ಬರು ಪುಟ್ಟ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

By

Published : Mar 5, 2021, 11:39 AM IST

ನವದೆಹಲಿ: ತನ್ನ ನಾಲ್ಕೂವರೆ ವರ್ಷದ ಹಾಗೂ ನಾಲ್ಕು ತಿಂಗಳ ಮಕ್ಕಳನ್ನು ಕೊಂದ ಮಹಿಳೆ ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ದೆಹಲಿಯ ಶಕುರ್ಪುರ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯ ಈ ನಿರ್ಧಾರಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಬಂಧನ: 500 ಗ್ರಾಂ ಎಂಡಿಎಂಎ ಮಾತ್ರೆಗಳು ವಶಕ್ಕೆ

ಮಹಿಳೆಯ ಕುಟುಂಬ ಮತ್ತು ನೆರೆಹೊರೆಯವರನ್ನು ಪೊಲೀಸರು ವಿಚಾರಿಸುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ABOUT THE AUTHOR

...view details