ಅಕೋಲಾ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ತನ್ನ 20 ದಿನದ ಅನಾರೋಗ್ಯಪೀಡಿತ ಮಗಳನ್ನು ಕೊಂದ ಗಂಭೀರ ಆರೋಪದಡಿ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ. ವಾಡಿ ಆದಂಪುರ ಗ್ರಾಮದ ನಿವಾಸಿಯಾದ ಮಹಿಳೆ (26) ತನ್ನ ತಾಯಿಯ ಚಿಕ್ಕಪ್ಪನೊಂದಿಗೆ ಕಳೆದ ತಿಂಗಳು ಮಗಳನ್ನು ಚಿಕಿತ್ಸೆಗಾಗಿ ತೆಲ್ಹಾರ ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ದಿದ್ದಳು. ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಮಗುವನ್ನು ಅಕೋಲಾದ ಜಿಲ್ಲಾ ಜನರಲ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ, ಜಿಲ್ಲಾಸ್ಪತ್ರೆಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿರುವುದು ಬೆಳಕಿಗೆ ಬಂದಿದೆ.
ಅನಾರೋಗ್ಯಪೀಡಿತ 20 ದಿನದ ಹಸುಗೂಸು ಕೊಂದ ತಾಯಿಯ ಬಂಧನ - ಪೊಲೀಸ್ ಇನ್ಸ್‌ಪೆಕ್ಟರ್ ದ್ಯಾನೋಬಾ ಫಾಡ್
ಹಸುಳೆಯನ್ನು ಕೊಂದ ಕಾರಣಕ್ಕೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಮಹಿಳೆಯನ್ನು ಬಂಧಿಸಿ ಕೊಲೆ ಆರೋಪ ಹೊರಿಸಲಾಗಿದೆ. ಆದರೆ ಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ.
20 ದಿನದ ಅನಾರೋಗ್ಯದ ಹಸುಗೂಸನ್ನು ಕೊಂದ ತಾಯಿಯ ಬಂಧನ
ಮಂಗಳವಾರ ಆಕೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಯನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಆರೋಪಿಯನ್ನು ಬಂಧಿಸಿ ಕೊಲೆ ಆರೋಪ ಹೊರಿಸಲಾಗಿದೆ. ಆದರೆ ಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ದ್ಯಾನೋಬಾ ಫಾಡ್ ತಿಳಿಸಿದ್ದಾರೆ.
ಇದನ್ನೂ ಓದಿ:ಫ್ಲೆಕ್ಸ್ ಬ್ಯಾನರ್ ಅಳವಡಿಸುವಾಗ ವಿದ್ಯುತ್ ಶಾಕ್: ಬೆಳ್ತಂಗಡಿಯಲ್ಲಿ ಓರ್ವ ಸಾವು, ಮತ್ತೋರ್ವ ಗಂಭೀರ