ದೌಸಾ (ರಾಜಸ್ಥಾನ):ರೈಲು ಬರುವ ವೇಳೆ ಐವರು ಮಕ್ಕಳೊಂದಿಗೆ ಮಹಿಳೆವೋರ್ವಳು ಹಳಿಯ ಮೇಲೆ ಜಿಗಿದಿದ್ದು, ಮಹಿಳೆ ಹಾಗೂ ಮೂವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಐವರು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದ ಮಹಿಳೆ.. ನಾಲ್ವರು ದುರ್ಮರಣ - Dausa news
ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಮಹಿಳೆವೋರ್ವಳು ಐವರು ಮಕ್ಕಳೊಂದಿಗೆ ರೈಲಿನ ಮುಂದೆ ಜಿಗಿದಿದ್ದು, ಇಬ್ಬರು ಬಾಲಕಿಯರನ್ನು ಬಿಟ್ಟು ಉಳಿದ ನಾಲ್ವರು ಸಾವನ್ನಪ್ಪಿದ್ದಾರೆ.
ಐವರು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದ ಮಹಿಳೆ
ರಾಜಸ್ಥಾನದ ದೌಸಾ ಜಿಲ್ಲೆಯ ಮಂದವಾರ್ ರೈಲ್ವೆ ನಿಲ್ದಾಣದ ಸಮೀಪ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಬಾಲಕಿಯರು ಬದುಕುಳಿದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಛಿದ್ರ ಛಿದ್ರವಾಗಿದ್ದ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಗಾಯಗೊಂಡಿರುವ ಇಬ್ಬರು ಮಕ್ಕಳನ್ನು ಚಿಕಿತ್ಸೆಗೆ ದಾಖಲಿಸಿದ್ದಾರೆ.
ಮೃತ ಮಹಿಳೆಯ ಪತಿಯು ಮಂದವಾರ್ ರೈಲ್ವೆ ನಿಲ್ದಾಣದಲ್ಲಿ ಗೇಟ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.
Last Updated : May 10, 2021, 1:06 PM IST